ಬೆಂಗಳೂರು, ಜು 22 (DaijiworldNews/HR): ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪರನ್ನು ಸಿಎಂ ಮಾಡಿದ್ದರು. ಹಾಗಾಗಿ ಪುತ್ರನ ಬದಲು ಕಾರ್ಯಕರ್ತರಿಗೆ ಬಿಎಸ್ವೈಯವರು ಕ್ಷೇತ್ರ ಬಿಟ್ಟುಕೊಡಬೇಕಿತ್ತು ಎಂದು ಮಾಜಿ ಸಚಿವ ಜಮೀರ್ ಅಹ್ಮದ್ಖಾನ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿಯಲ್ಲಿ ಕಾರ್ಯಕರ್ತರು ಇಲ್ಲವೇ? ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ಬಿಜೆಪಿ ಕಾರ್ಯಕರ್ತರು ಆದರೆ ಅವರಲ್ಲಿ ಒಬ್ಬರಿಗೆ ಯಾಕೆ ಕ್ಷೇತ್ರ ಬಿಟ್ಟುಕೊಡಲಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಶಿಕಾರಿಪುರ ಕ್ಷೇತ್ರವನ್ನು ನಾನು ಬಿಟ್ಟುಕೊಡುತ್ತಿದ್ದೇನೆ. ಇಲ್ಲಿ ನನ್ನ ಬದಲಾಗಿ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಮೈಸೂರು ಭಾಗದಿಂದ ಸ್ಪರ್ಧಿಸಲು ವಿಜಯೇಂದ್ರಗೆ ಒತ್ತಡವಿದೆ. ಆದರೆ ಶಿಕಾರಿಪುರದಲ್ಲಿ ಸ್ಥಾನ ತೆರವಾಗುವುದರಿಂದ ಅವರು ಶಿಕಾರಿಪುರದಲ್ಲೇ ಸ್ಪರ್ಧಿಸಲಿದ್ದಾರೆ ಎಂದು ಯಡಿಯೂರಪ್ಪ ಘೋಷಿಸಿದ್ದರು.