ನವದೆಹಲಿ, ಜು 22(DaijiworldNews/DB): ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ವಿರುದ್ದ ತನಿಖೆ ನಡೆಸುವಂತೆ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಆ ಮೂಲಕ ಬಿಎಸ್ವೈಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
2006-07ರ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ವೈ ವಿರುದ್ದ ತನಿಖೆಗೆ ಹೈಕೋರ್ಟ್ ಆದೇಶಿಸಿತ್ತು. ಆದರೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಬಿ.ಎಸ್. ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಈ ಮನವಿ ಕುರಿತು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿದೆ.
ಸುಪ್ರೀಂಕೋರ್ಟ್ನ ಆದೇಶದಿಂದ ಯಡಿಯೂರಪ್ಪ ಅವರಿಗೆ ನಿರಾಳವಾದಂತಾಗಿದೆ.