ಕೇರಳ, ಜು 22 (DaijiworldNews/HR): ಕೇರಳದಲ್ಲಿ ಮಂಕಿಪಾಕ್ಸ್ನ ಮೂರನೇ ಪ್ರಕರಣವನ್ನು ವರದಿಯಾಗಿದೆ. ಈ ತಿಂಗಳ ಪ್ರಾರಂಭದಲ್ಲಿ ಯುಎಇಯಿಂದ ಕೇರಳಕ್ಕೆ ಬಂದ 35 ವರ್ಷದ ವ್ಯಕ್ತಿಯೊಬ್ಬರ ವರದಿ ಪಾಸಿಟಿವ್ ಪರೀಕ್ಷೆ ಬಂದಿದೆ.
ಜುಲೈ 6 ರಂದು ಮಲಪ್ಪುರಂ ಮೂಲದ ವ್ಯಕ್ತಿಯು ಯುಎಇಯಿಂದ ರಾಜ್ಯಕ್ಕೆ ಆಗಮಿಸಿದ್ದು, ಅಲ್ಲಿನ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಇನ್ನು ಮಂಕಿಪಾಕ್ಸ್ ವೈರಸ್ ಎನ್ನುವುದು ಜನರ ನಡುವೆ ಸುಲಭವಾಗಿ ಹರಡುವುದಿಲ್ಲ, ಆದರೆ ಈ ವೈರಸ್ ಇಲಿಗಳಂತಹ ಸೋಂಕಿತ ಜೀವಿಗಳಿಂದ ಮನುಷ್ಯರಿಗೆ ಹರಡುತ್ತದೆ. ಮಂಕಿಪಾಕ್ಸ್ ಅಪರೂಪದ ಕಾಯಿಲೆಯಾಗಿದ್ದು, ಇದು ಮಂಕಿಪಾಕ್ಸ್ ವೈರಸ್ ಸೋಂಕಿನಿಂದ ಉಂಟಾಗುತ್ತದೆ.