ಬೆಂಗಳೂರು, ಜು 23 (DaijiworldNews/MS): ಮೈಸೂರು ವಿಮಾನ ನಿಲ್ದಾಣ ಇನ್ಮುಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ವಿಮಾನ ನಿಲ್ದಾಣವಾಗಲಿದೆ. ಹಲವಾರು ವರ್ಷಗಳಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೈಸೂರು ಮಹಾರಾಜರ ಹೆಸರು ಇಡಬೇಕು ಎನ್ನುವುದು ಮೈಸೂರು ರಾಜಕಾರಣಿಗಳ ಮತ್ತು ಜನರ ಒತ್ತಾಯವಾಗಿತ್ತು.
ಸಂಸದ ಪ್ರತಾಪ ಸಿಂಹ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕೆಂದು ಸಿಎಂಗೆ ಮನವಿ ಮಾಡಿದ್ದರು.
ಮೈಸೂರು ವಿಮಾನ ನಿಲ್ದಾಣಕ್ಕೆ ದಿವಂಗತ ಮಹಾರಾಜ ನಾಲ್ವಡಿ ಕೃಷ್ಣ ರಾಜ ಒಡೆಯರ್ ಅವರ ಹೆಸರನ್ನು ಇಡಲು ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1894 ರಿಂದ 1940 ರಲ್ಲಿ ಅವರ ಮರಣದವರೆಗೆ ಮೈಸೂರು ರಾಜ್ಯದ ಇಪ್ಪತ್ತನಾಲ್ಕನೇ ಮಹಾರಾಜರಾಗಿದ್ದರು.