ಕೊಲ್ಕತ್ತ, ಜು 23 (DaijiworldNews/HR): ಕೊಲ್ಕತ್ತ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿಯೊಬ್ಬರು ಕರ್ತವ್ಯದ ವೇಳೆಯೇ ಹಣೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತರನ್ನು ಸಿಐಎಸ್ಎಫ್ ಸಬ್ ಇನ್ಸ್ಪೆಕ್ಟರ್ ಪಂಕಜ್ ಕುಮಾರ್ ಎಂದು (35) ಗುರುತಿಸಲಾಗಿದೆ.
ಇಂದು ಬೆಳಗ್ಗೆ ವಿಮಾನ ನಿಲ್ದಾಣದ ಬೇಸ್ಮೆಂಟ್ನ ಶೌಚಾಲಯದ ಮುಂದೆ ಹಣೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.