ಮೈಸೂರು, ಜು 23 (DaijiworldNews/HR): ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಮೈಸೂರಿನಲ್ಲೋ, ಬೆಂಗಳೂರಿನಲ್ಲೋ ತೀರ್ಮಾನವಾಗುವುದಿಲ್ಲ. ಪಕ್ಷದ ಹೈಕಮಾಂಡ್ ಅದನ್ನು ತೀರ್ಮಾನ ಮಾಡುತ್ತದೆ ಹಾಗಾಗಿ ಚುನಾವಣೆ ಫಲಿತಾಂಶಕ್ಕೆ ಮುನ್ನೆವೇ ನಾನು ಸಿಎಂ, ನಾನು ಸಿಎಂ ಎಂದು ಹೇಳುವುದು ಸರಿಯಲ್ಲ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ನಾಯಕತ್ವಕ್ಕೆ ಕೊಡಬೇಕು ಎಂದು ಪರಿಸ್ಥಿತಿ ನೋಡಿಕೊಂಡು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಕಾಂಗ್ರೆಸ್ ಯಾವಾಗಲೂ ಸಾಮೂಹಿಕ ನಾಯಕತ್ವದಲ್ಲೇ ಹೋಗುವುದು. ನಮ್ಮದು ಯಾವಾಗಲೂ ಸಾಮೂಹಿಕ ನಾಯಕತ್ವ. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಬೇಕು ಅದೇ ನಮ್ಮ ಉದ್ದೇಶ ಎಂದರು.
ಇನ್ನು ಯಡಿಯೂರಪ್ಪ ಅವರ ಶಿಕಾರಿಪುರ ಕ್ಷೇತ್ರ ತಮ್ಮ ಮಗನಿಗೆ ಬಿಟ್ಟು ಕೊಟ್ಟ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ವೈಯಕ್ತಿಕ ನಿರ್ಧಾರ. ಅದರ ಬಗ್ಗೆ ನಾನೇನು ಮಾತನಾಡಲ್ಲ. ಎಲ್ಲರಿಗೂ ಅವರದೇ ತೀರ್ಮಾನಗಳನ್ನು ತೆಗೆದುಕೊಳ್ಳುವ ಸ್ವತಂತ್ರ ಇರುತ್ತದೆ ಎಂದು ಹೇಳಿದ್ದಾರೆ.