ನವದೆಹಲಿ, ಜು 23 (DaijiworldNews/HR): ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿ ಮಾಡಿದೆ.
ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿ ಮಾಡಿದ್ದು, ಜುಲೈ 26ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಇನ್ನು ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 21 ರಂದು ಸೋನಿಯಾ ಗಾಂಧಿ ಅವರನ್ನು ಮೂರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿತ್ತು.