ಕುಷ್ಟಗಿ (ದೋಟಿಹಾಳ), ಜು 23 (DaijiworldNews/DB): ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ 2ನೇ ಮದುವೆಯಾಗಿದ್ದಾರೆಂಬ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದಕ್ಕೆ ವಿಜಯಾನಂದ ಕಾಶಪ್ಪನವರ್ ಗರಂ ಆಗಿದ್ದಾರೆ.
ಕೊಪ್ಪಳದ ಕುಷ್ಟಗಿಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಈ ಬಗ್ಗೆ ದಾಖಲೆ ಇದ್ದರೆ ನೀಡ. ಫೋಟೋ ವೈರಲ್ ಆಗಿರುವುದು ನನಗೆ ಗೊತ್ತಿಲ್ಲ. ಮಾಧ್ಯಮದವರಿಗೆ ಫೋಟೋ ವೈರಲ್ ಮಾಡುವುದೇ ಕೆಲಸ. ವಿರೋಧಿಗಳ ಕುತಂತ್ರಗಳಿಗೆ ನಾನು ಬಗ್ಗುವುದಿಲ್ಲ ಎಂದರು.
ಸಿಎಂ ಯಾರು ಎಂಬ ಜಮೀರ್ ಹೇಳಿಕೆ ವೈಯಕ್ತಿಕ. ಈ ಬಗ್ಗೆ ನಾನೇನು ಮಾತನಾಡುವುದಿಲ್ಲ. ಕಾಂಗ್ರೆಸ್ನಲ್ಲಿ ಹೈಕಮಾಂಡ್ ಇದ್ದು, ಸಿಎಂ ಯಾರಾಗಬೇಕು ಎಂಬುದನ್ನು ಅವರೇ ನಿರ್ಧರಿಸುತ್ತಾರೆ ಎಂದು ಪ್ರತಿಕ್ರಿಯಿಸಿದರು.