ಹುಬ್ಬಳ್ಳಿ, ಜು 23 (DaijiworldNews/DB): ಔಷಧಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಗರದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಅವಘಡದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಹುಬ್ಬಳ್ಳಿ ಹೊರ ವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಮದ್ದಿನ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ದುರ್ಘಟನೆಯಲ್ಲಿ ಬೈಕೊಂದು ಭಸ್ಮವಾಗಿದೆ. ಗಂಭೀರ ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.