ನವದೆಹಲಿ, ಜು 23 (DaijiworldNews/HR): ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ಸಂಸತ್ತನ್ನುದ್ದೇಶಿಸಿ ಇಂದು ವಿದಾಯ ಭಾಷಣ ಮಾಡಿದ್ದಾರೆ.
ರಾಮನಾಥ್ ಕೋವಿಂದ್ ಅವರಿಗೆ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿದ್ದು, ಈ ಸಮಾರಂಭವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಿದರು.
ಇನ್ನು ದೇಶಕ್ಕಾಗಿ ಸೇವೆ ಸಲ್ಲಿಸುವಾಗ ತಮ್ಮ ಐದು ವರ್ಷಗಳ ಅಧಿಕಾರಾವಧಿಯ ಪ್ರಮುಖ ಕ್ಷಣಗಳನ್ನು ಮತ್ತು ಸಾಂಕ್ರಾಮಿಕ ರೋಗದ ಸಮಯದಲ್ಲಿ ಎದುರಿಸಿದ ಹೋರಾಟವನ್ನ ನೆನಪಿಸಿಕೊಂಡಿದ್ದಾರೆ.