ಲಕ್ನೋ,ಬೆಳ್ತಂಗಡಿ, ಜು 23 (DaijiworldNews/HR): ಶಾಪಿಂಗ್ ಮಾಲ್ ಆವರಣದಲ್ಲಿ ಅನಧಿಕೃತವಾಗಿ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರು ಶನಿವಾರ ಬಂಧಿಸಿದ್ದು, ಈ ಪ್ರಕರಣದಲ್ಲಿ ಇದುವರೆಗೆ 5 ಮಂದಿಯನ್ನು ಬಂಧಿಸಲಾಗಿದೆ.
ಇಂದು ಲಕ್ನೋದ ಚೌಪಾಟಿಯ ನಿವಾಸಿ ಮೊಹಮ್ಮದ್ ಆದಿಲ್ನನ್ನು ಬಂಧಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ರಾಜೇಶ್ ಕುಮಾರ್ ಶ್ರೀವಾಸ್ತವ್, ಆರೋಪಿಯು ಮಾಲ್ ಆವರಣದಲ್ಲಿ ಅನುಮತಿಯಿಲ್ಲದೆ ಧಾರ್ಮಿಕ ಪ್ರಾರ್ಥನೆ ಸಲ್ಲಿಸಿದವರಲ್ಲಿದ್ದು, ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ ಮೂರು ದಿನಗಳ ನಂತರ ಈ ಬಂಧನ ನಡೆದಿದೆ ಎಂದು ತಿಳಿಸಿದ್ದಾರೆ.
ಇನ್ನು ಜುಲೈ 13 ರಂದು ಲುಲು ಮಾಲ್ನಲ್ಲಿ ಜನರು ನಮಾಜ್ ಮಾಡುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.