ನವದೆಹಲಿ, ಜು 24 (DaijiworldNews/HR): ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಸೋಮವಾರ(ಜುಲೈ 25) ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆಯಲಿದೆ.
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯಸಭೆಯ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯ ಗವರ್ನರ್ಗಳು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳ ಮುಖ್ಯಸ್ಥರು, ಸಂಸತ್ತಿನ ಸದಸ್ಯರು ಮತ್ತು ಭಾರತ ಸರ್ಕಾರದ ಪ್ರಧಾನ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರು ವಿಧ್ಯುಕ್ತ ಮೆರವಣಿಗೆಯಲ್ಲಿ ಸೆಂಟ್ರಲ್ ಹಾಲ್ಗೆ ಆಗಮಿಸಲಿದ್ದು, ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಬಳಿಕ ರಾಷ್ಟ್ರಪತಿ ಭಾಷಣ ಮಾಡಲಿದ್ದಾರೆ.
ಇನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಇಂದು ಮುಕ್ತಾಯವಾಗಲಿದೆ.