ನವದೆಹಲಿ, ಜು 24 (DaijiworldNews/HR): ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ನಮ್ಮ ಅತ್ಯಂತ ಪ್ರತಿಷ್ಠಿತ ಕ್ರೀಡಾಪಟುಗಳಲ್ಲಿ ಒಬ್ಬರಿಂದ ಉತ್ತಮ ಸಾಧನೆಯಾಗಿದೆ. ವಿಶ್ವ ಚಾಂಪಿಯನ್ಶಿಪ್ನಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದಿದ್ದಕ್ಕಾಗಿ ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳು. ಇದು ಭಾರತೀಯ ಕ್ರೀಡೆಗಳಿಗೆ ವಿಶೇಷ ಕ್ಷಣವಾಗಿದೆ ಎಂದಿದ್ದಾರೆ.
ಇನ್ನು ಭಾರತದ ನೀರಜ್ ಚೋಪ್ರಾ 88.13 ಮೀಟರ್ ದೂರ ಕ್ರಮಿಸಿ ಬೆಳ್ಳಿ ಪದಕ ಪಡೆದಿದ್ದು, ನೀರಜ್ಗೆ ಪ್ರಬಲ ಸ್ಪರ್ಧೆ ನೀಡಿದ ಆಯಂಡರ್ಸನ್ ಪೀಟರ್ ಮೂರು ಬಾರಿ 90 ಮೀಟರ್ ಗಿಂತ ಹೆಚ್ಚು ಎಸೆದು ಬಂಗಾರದ ಪದಕ ಪಡೆದಿದ್ದಾರೆ.