ಹುಬ್ಬಳ್ಳಿ, ಜು 24 (DaijiworldNews/HR): ತಾರಿಹಾಳದ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದವರಲ್ಲಿ ಮೂವರು ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ವಿಜಯಲಕ್ಷ್ಮಿ ಯಚ್ಚನಾಗರ, ಗೌರವ್ವ ಹಿರೇಮಠ ಹಾಗೂ ಮಾಳೇಶ ಹದ್ದನ್ನವರ ಎಂದು ಗುರುತಿಸಲಾಗಿದೆ.
ಶನಿವಾರ ರಾತ್ರಿ ಚಿಕಿತ್ಸೆ ಫಲಿಸದೆ ವಿಜಯಲಕ್ಷ್ಮಿ ಸಾವನ್ನಪ್ಪಿದ್ದು, ಇಂದು ಗೌರವ್ವ ಹಾಗೂ ಮಾಳೇಶ ಮೃತಪಟ್ಟಿದ್ದಾರೆ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಮಾಹಿತಿ ನೀಡಿದ್ದಾರೆ.