ಬೆಂಗಳೂರು, ಜು 24 (DaijiworldNews/HR): ಕರ್ನಾಟಕದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಪಕ್ಷವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಈಗಾಗಲೇ ಮುಖ್ಯಮಂತ್ರಿ ಹುದ್ದೆಗಾಗಿ ಕಚ್ಚಾಟ ಶುರುವಾಗಿದ್ದು, ಯಾವುದೇ ಕಾರಣಕ್ಕೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಡಲ್ಲ. ಮತ್ತೆ ಭಾರತೀಯ ಜನಾತ ಪಾರ್ಟಿ 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದರು.
ಇನ್ನು ಎಸ್. ಆರ್. ವಿಶ್ವನಾಥ್ ಗೆ ಸಚಿವ ಸಂಪುಟ ಸೇರಬೇಕು. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.