ಗೊಂಡಾ, ಜು 24 (DaijiworldNews/HR): ಮೂರು ವರ್ಷದ ಬಾಲಕಿಯ ಮೇಲೆ ಹದಿಹರೆಯದ ಹುಡುಗನೊಬ್ಬ ಅತ್ಯಾಚಾರವೆಸಗಿರುವ ಘಟನೆ ವಜೀರ್ಗಂಜ್ ಪ್ರದೇಶದ ಹಳ್ಳಿಯೊಂದರಲ್ಲಿ ಎಂದು ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಬಾಲಕಿಯನ್ನು 13 ವರ್ಷದ ಬಾಲಕ ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.
ಇನ್ನು ಆರೋಪಿಯನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದ್ದು, ಅಲ್ಲಿಂದ ಬಾಲಾಪರಾಧಿಗಳ ಗೃಹಕ್ಕೆ ಕಳುಹಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.