ನವದೆಹಲಿ, ಜು 25 (DaijiworldNews/HR): ಭಾರತದಲ್ಲಿ ಬುಡಕಟ್ಟು ಸಮುದಾಯದ ಮೊದಲ ಮಹಿಳೆಯಾಗಿ ಹಾಗೂ ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಅವರ ಸಮ್ಮುಖದಲ್ಲಿ ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆಯಿತು.
"ಭಾರತದ ಎಲ್ಲಾ ನಾಗರಿಕರ ಭರವಸೆಗಳು ಮತ್ತು ಆಕಾಂಕ್ಷೆಗಳು ಮತ್ತು ಹಕ್ಕುಗಳ ಸಂಕೇತವಾಗಿರುವ ಈ ಪವಿತ್ರ ಸಂಸತ್ತಿನಿಂದ ನಾನು ಎಲ್ಲಾ ದೇಶವಾಸಿಗಳನ್ನು ನಮ್ರತೆಯಿಂದ ಅಭಿನಂದಿಸುತ್ತೇನೆ. ನಿಮ್ಮ ಬಾಂಧವ್ಯ, ನಿಮ್ಮ ನಂಬಿಕೆ ಮತ್ತು ನಿಮ್ಮ ಬೆಂಬಲ ನನಗೆ ಈ ಹೊಸ ಜವಾಬ್ದಾರಿಯನ್ನು ಪೂರೈಸುವಲ್ಲಿ ನನ್ನ ದೊಡ್ಡ ಶಕ್ತಿಯಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಮಂತ್ರಿಮಂಡಲದ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ಮಿಷನ್ಗಳ ಮುಖ್ಯಸ್ಥರು, ಸಂಸತ್ತಿನ ಸದಸ್ಯರು ಮತ್ತು ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳು ಭಾಗವಹಿಸಿದ್ದಾರೆ.