ಮುಂಬೈ, ಜು 25 (DaijiworldNews/MS): ಬಾಲಿವುಡ್ ನಟಿ ಕತ್ರಿನಾ ಕೈಫ್ ಹಾಗೂ ನಟ ವಿಕ್ಕಿ ಕೌಶಲ್ ದಂಪತಿಗಳಿಗೆ ಜೀವ ಬೆದರಿಕೆ ಹಾಕಿದ ಅಪರಿಚಿತ ವ್ಯಕ್ತಿ ವಿರುದ್ದ ದೂರು ದಾಖಲಾಗಿದೆ.
ಸಾಮಾಜಿಕ ಮಾಧ್ಯಮದ ಮೂಲಕ ಸ್ಟಾರ್ ದಂಪತಿಗಳಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಸಾಂತಾಕ್ರೂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕತ್ರಿನಾ ಜುಲೈ 16 ರಂದು ಪತಿ ವಿಕ್ಕಿ ಜೊತೆಗೆ ಮಾಲ್ಡೀವ್ಸ್ನಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು , ಹುಟ್ಟುಹಬ್ಬದ ಫೋಟೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದು ವೈರಲ್ ಆಗಿತ್ತು.