ರಾಯಚೂರು, ಜು 25 (DaijiworldNews/HR): ಕಾಲೇಜಿಗೆ ತೆರಳಿದ್ದಂತ ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು, ಪೋಷಕರು ಆತಂಕಗೊಂಡಿದ್ದಾರೆ.
ರಾಯಚೂರು ಜಿಲ್ಲೆಯ ಸ್ಟೇಷನ್ ರಸ್ತೆಯಲ್ಲಿರುವಂತ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದಂತ ನಾಲ್ವರು ವಿದ್ಯಾರ್ಥಿನಿಯರು, ಕಾಲೇಜಿಗೆ ಹೋಗಿ ಬರೋದಾಗಿ ತೆರಳಿದ್ದು, ಬಳಿಕ ಮನೆಗೆ ವಾಪಾಸ್ ಬಂದಿಲ್ಲ ಎಂದು ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಇನ್ನು ವಿದ್ಯಾರ್ಥಿನಿಯರ ಪೋಷಕರು ನೀಡಿದ ದೂರನಿಂದಾಗಿ ಸದರಬಜಾರ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿದ್ಯಾರ್ಥಿನಿಯರ ಪತ್ತೆಗಾಗಿ ಪಿಎಸ್ಐ ನೇತೃತ್ವದಲ್ಲಿ ತಂಡವನ್ನು ರಚಿಸಿ ತನಿಖೆ ನಡೇಸುತ್ತಿದ್ದಾರೆ.