ಬಳ್ಳಾರಿ, ಜು 25 (DaijiworldNews/HR): ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಗೋನಾಳ ಗ್ರಾಮದಲ್ಲಿ ಚರಂಡಿ ನೀರು ಕುಡಿಯುವ ನೀರಿನ ಜೊತೆ ಸೇರಿದ ನೀರನ್ನು ಕುಡಿದ ಪರಿಣಾಮ್ ಓರ್ವ ಬಾಲಕಿ ಮೃತಪಟ್ಟು, 20ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಕಲುಷಿತ ನೀರು ಕುಡಿದ ಪರಿಣಾಮ ವಾಂತಿ-ಬೇಧಿ ಕಾಣಿಸಿಕೊಂಡು ಚಿಕಿತ್ಸೆ ಫಲಿಸದೇ ಸುಕನ್ಯಾ(10) ಬಾಲಕಿ ಸಾವನ್ನಪ್ಪಿದ್ದು, ಅಸ್ವಸ್ಥಗೊಂಡ ಗ್ರಾಮಸ್ಥರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡಯುತ್ತಿದ್ದಾರೆ.
ಇನ್ನು ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣಗೊಂಡ ಕಾರಣ ಗೋನಾಳ ಗ್ರಾಮದ ಜನರಲ್ಲಿ ವಾಂತಿ-ಬೇಧಿ ಕಾಣಿಸಿಕೊಂಡಿದೆ ಎನ್ನಲಾಗಿದೆ.