ಬೆಂಗಳೂರು, ಜು 25 (DaijiworldNews/HR): ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮೂರನೇ ಸ್ಥಾನಕ್ಕೆ ಇಳಿಯಲಿದೆ ಎಂದು ಸಚಿವ ಆರ್. ಅಶೋಕ್ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಜನರು ಜಾತೀಯತೆ ರಾಜಕಾರಣವನ್ನ ಪ್ರೋತ್ಸಾಹಿಸುವುದಿಲ್ಲ. ಕರ್ನಾಟಕ ಕಾಂಗ್ರೆಸ್ನಲ್ಲಿ ಆಂತರಿಕ ಕಚ್ಚಾಟವಿದೆ ಎಂದರು.
ಇನ್ನು ಕಾಂಗ್ರೆಸ್ ನಾಯಕರು ಯಾವುದೇ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿಲ್ಲ. ಜೊತೆಗೆ ಸಮಾಜದಲ್ಲಿ ಶಾಂತಿ ಕೆದಡುವ ಕೆಲಸಗಳನ್ನು ಮಾಡುತ್ತಿರುವುದರಿಂದ ಮುಂಬರುವ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ಇಳಿಯಲಿದೆ ಎಂದು ಹೇಳಿದ್ದಾರೆ.