ನವದೆಹಲಿ, ಜು 25 (DaijiworldNews/HR): ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ರಾಜ್ಯಪಾಲರ ಹುದ್ದೆ ಮತ್ತು ರಾಜ್ಯಸಭಾ ಸ್ಥಾನಗಳನ್ನ ನೀಡುವುದಾಗಿ ಸುಳ್ಳು ಭರವಸೆಗಳನ್ನ ನೀಡಿ 100 ಕೋಟಿ ವಂಚಿಸಲು ಮುಂದಾದ ಖತರ್ನಾಕ್ ಗ್ಯಾಂಗ್ನ ನಾಲ್ವರನ್ನು ಬಂಧಿಸಿದ್ದಾರೆ.
ರಾಜ್ಯಸಭೆಯ ಸೀಟುಗಳ ವ್ಯವಸ್ಥೆ, ರಾಜ್ಯಪಾಲರಾಗಿ ನೇಮಕ, ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಇಲಾಖೆಗಳ ಅಡಿಯಲ್ಲಿ ಬರುವ ವಿವಿಧ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ಸುಳ್ಳು ಭರವಸೆ ನೀಡುವ ಮೂಲಕ ಖಾಸಗಿ ವ್ಯಕ್ತಿಗಳನ್ನ ವಂಚಿಸುತ್ತಿದ್ದರು ಎನ್ನಲಾಗಿದೆ.
ಇನ್ನು ಆರೋಪಿಗಳು 100 ಕೋಟಿ ಮೊತ್ತದ ಗಮನಾರ್ಹ ಮೊತ್ತಕ್ಕೆ ಪ್ರತಿಯಾಗಿ ರಾಜ್ಯಸಭೆಯಲ್ಲಿ ಸ್ಥಾನ ನೀಡುವುದಾಗಿ ಸುಳ್ಳು ಭರವಸೆ ನೀಡುವ ಮೂಲಕ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬೆಳಕಿಗೆ ಬಂದಿದೆ.