ತುಮಕೂರು, ಜು 26 (DaijiworldNews/DB): ಲಾರಿಯೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಹೊತ್ತಿ ಉರಿದ ಘಟನೆ ತುಮಕೂರಿನ ಗೂಳೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಲಾರಿಯು ತುಮಕೂರಿನ ಕಡೆಗೆ ಎಳನೀರು ತುಂಬಿ ಸಾಗುತ್ತಿತ್ತು. ಈ ವೇಳೆ ಗೂಳೂರಿನಲ್ಲಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ತತ್ಕ್ಷಣ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಲಾರಿಯ ಚಾಲಕ ಮತ್ತು ಕ್ಲೀನರ್ ಲಾರಿಯಿಂದ ಜಿಗಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಗ್ನಿಶಾಮಕ ದಳದ ಸಿಬಂದಿ ಕೂಡಲೇ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು. ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ರಸ್ತೆ ವಿಭಜಕವೇ ಅಪಘಾತಕ್ಕೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.