ಬೆಂಗಳೂರು, ಜು 26 (DaijiworldNews/HR): ಕೇರಳದಲ್ಲಿ ಮಂಕಿಪಾಕ್ಸ್ ಸೋಂಕಿನ 2 ಪ್ರಕರಣ ಪತ್ತೆಯಾದ ಬೆನ್ನಲ್ಲೇ ಕರ್ನಾಟಕದಲ್ಲಿ ಆತಂಕ ಮೂಡಿದ್ದು, ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿ, ಮಾರ್ಗಸೂಚಿ ಹೊರಡಿಸಲಾಗಿದೆ.
ದೆಹಲಿಯಲ್ಲಿ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಕಂಡು ಬಂದಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಕರ್ನಾಟಕದಲ್ಲಿ ಮಂಕಿಪಾಕ್ಸ್ ಕುರಿತು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿ ಮುನ್ನೆಚ್ಚರಿಕೆ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದೆ.