ನವದೆಹಲಿ, ಜು 26 (DaijiworldNews/HR): ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೇಸಿದ ಸುಪ್ರೀಂ ಕೋರ್ಟ್ ಮತ್ತೆ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿದೆ.
ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಸರ್ಕಾರ ಇಂದಿನ ವಿಚಾರಣೆ ವೇಳೆ ಹೆಚ್ಚುವರಿ ಲಿಖಿತ ದಾಖಲೆಗಳನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದು, ಇದಕ್ಕೆ ಉತ್ತರಿಸಲು ಸಮಯ ಬೇಕು ಎಂದು ಕರ್ನಾಟಕ ಪರ ವಕೀಲ ಶಾಮ್ ದಿವಾನ್ ವಾದ ಮಂಡಿಸಿ ಅರ್ಜಿಯ ಅಂತಿಮ ವಿಚಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನು ಮೇಕೆದಾಟು ಅರ್ಜಿ ವಿಚಾರಣೆ ಹಂತದಲ್ಲಿದ್ದು, ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ಸಧ್ಯಕ್ಕೆ ಚರ್ಚೆಯಾಗಬಾರದು ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿ ಆಗಸ್ಟ್ 10ಕ್ಕೆ ಮುಂದೂಡಿದೆ.