ಬೆಂಗಳೂರು, ಜು 26 (DaijiworldNews/HR): ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಲ್ಲಿ ಸೋನಿಯಾ ಗಾಂಧಿ ಅವರು ವಿಚಾರಣೆಗೆ ಮಂಗಳವಾರ ಹಾಜರಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
ರಾಷ್ಟ್ರಪತಿ ಭವನಕ್ಕೆ ಪ್ರತಿಭಟನಾ ಮೆರವಣಿಗೆ ತೆರಳುವ ಸಂದರ್ಭದಲ್ಲಿ ಪೊಲೀಸರು ರಾಹುಲ್ ಗಾಂಧಿಯವರನ್ನು ವಶಕ್ಕೆ ಪಡೆದಿದ್ದು, ಅವರೊಂದಿಗೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಹಿತ ಹಲವು ನಾಯಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಇನ್ನು ಸೋನಿಯಾ ಗಾಂಧಿ ಅವರು ಜು.21ರಂದು ಗುರುವಾರ ಮೊದಲ ಬಾರಿಗೆ ಇಡಿ ಮುಂದೆ ವಿಚಾರಣೆಗೆ ಹಾಜರಾದಾಗಲೂ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆ ನಡೆಸಿದ್ದರು.