ನವದೆಹಲಿ, ಜು 26 (DaijiworldNews/HR): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಇಂದು ಚಾರ್ಜ್ಶೀಟ್ ಸಲ್ಲಿಸಿದೆ.
ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ನಲ್ಲಿ ನಡೆದಿರುವ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಫಾರೂಕ್ ಅಬ್ದುಲ್ಲಾ ಅವರಿಗೆ ಜಾರಿ ನಿರ್ದೇಶನಾಲಯ ಚಾರ್ಜ್ಶೀಟ್ ಸಲ್ಲಿಸಿದೆ.
ಇನ್ನು ಫಾರೂಕ್ ಅಬ್ದುಲ್ಲಾ ಅವರು ಆಗಸ್ಟ್ 27 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಮೇ 31 ರಂದು ಶ್ರೀನಗರದಲ್ಲಿ ಫಾರೂಕ್ ಅಬ್ದುಲ್ಲಾ ಅವರನ್ನು ಮೂರು ಗಂಟೆಗಳ ಕಾಲ ಇಡಿ ವಿಚಾರಣೆ ನಡೆಸಿತ್ತು.