ನವದೆಹಲಿ, ಜು 26 (DaijiworldNews/DB): ತೃಣಮೂಲ ಕಾಂಗ್ರೆಸ್ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರಿಗೆ ಮಂಗಳವಾರ ಜಾರಿ ನಿರ್ದೇಶನಾಲಯವು ಸಮನ್ಸ್ ಜಾರಿ ಮಾಡಿದ್ದು, ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಣಿಕ್ ಭಟ್ಟಾಚಾರ್ಯ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಕೋಲ್ಕತ್ತದ ಇ.ಡಿ ಕಚೇರಿಯಲ್ಲಿ ಬುಧವಾರ ಬೆಳಗ್ಗೆ ವಿಚಾರಣೆಗೆ ಹಾಜರಾಗಬೇಕು ಎಂದು ತಿಳಿಸಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಈ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತದ ಕೈಗಾರಿಕಾ ಸಚಿವ ಪಾರ್ಥ ಚಟರ್ಜಿ ಹಾಗೂ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರು ಇತ್ತೀಚೆಗಷ್ಟೇ ಇಡಿಯಿಂದ ಬಂಧಿಸಲ್ಪಟ್ಟಿದ್ದರು. ಇದೀಗ ಟಿಎಂಸಿಯ ಇನ್ನೋರ್ವ ಮುಖಂಡನಿಗೆ ಇಡಿ ಸಮನ್ಸ್ ನೀಡಿದೆ.