ಶ್ರೀನಗರ, ಜು 27 (DaijiworldNews/HR): ಭಯೋತ್ಪಾಕರು ಮತತು ಭದ್ರತಾ ಸಿಬ್ಬಂದಿಗಳ ನಡುವೆ ಇಂದು ಬೆಳ್ಳಂಬೆಳಿಗ್ಗೆ ಗುಂಡಿನ ಚಕಮಕಿ ನಡೆದಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್ನಲ್ಲಿ ನಡೆದಿದೆ.
ಕುಲ್ಗಾಮ್ ನಲ್ಲಿ ಬ್ರೈಹಾರ್ಡ್ ಕತ್ಪೋರಾದಲ್ಲಿ ಭಯೋತ್ಪಾದಕರು ಅಡಗಿ ಕುಳಿತಿರುವ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಬೆಳಿಗ್ಗೆ ಕಾರ್ಯಾಚರಣೆ ಪ್ರಾರಂಭಿಸಿದ್ದು, ಈ ವೇಳೆ ಗುಂಡಿನ ಚಕಮಕಿ ನಡೆದಿದೆ
ಇನ್ನು ಗುಂಡಿನ ಚಕಮಕಿ ನಡೆಯುತ್ತಿದ್ದು, ಈವರೆಗೂ ಯಾವುದೇ ಜೀವ ಹಾನಿಯ ಬಗ್ಗೆ ಮಾಹಿತಿ ಬಂದಿಲ್ಲ, ಕಾರ್ಯಾಚರಣೆ ಮುಂದುವರೆದಿದೆ ಎಂದು ಭದ್ರತಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.