ನವದೆಹಲಿ, ಜು 27 (DaijiworldNews/DB): ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪೂರ್ವನಿಯೋಜಿತ. ಎನ್ಐಎ ಮೂಲಕ ತನಿಖೆ ಮಾಡಲು ಆಗ್ರಹಿಸಲಾಗುವುದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಎನ್ಐಎ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ. ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದರು.
ಇನ್ನು ಪ್ರವೀಣ್ ಹತ್ಯೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಹಿಂದಿರುವ ಶಕ್ತಿಗಳನ್ನು ಹೆಡೆಮುರಿ ಕಟ್ಟುತ್ತೇವೆ. ಕಾಂಗ್ರೆಸ್ ಬೆಂಬಲಿಸುವ ಮತಾಂಧ ಶಕ್ತಿಗಳೇ ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಿದ್ದಾರೆ. ಎಲ್ಲವನ್ನೂ ಬಯಲಿಗೆಳೆಯುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.