ಚಿಕ್ಕಮಗಳೂರು, ಜು 27 (DaijiworldNews/DB): ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡಿಸಿ ಹಾಗೂ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್ ಅವರ ಹತ್ಯೆ ಖಂಡನೀಯ. ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ನೀಡಲು ರಾಜ್ಯ ಸರ್ಕಾರದಿಂದ ಸಾಧ್ತಯವಾಗುತ್ತಿಲ್ಲ. ಹೀಗಾಗಿ ಸಾಮೂಹಿಕ ರಾಜೀನಾಮೆ ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಮಂಗಳವಾರ ರಾತ್ರಿ ಪ್ರವೀಣ್ ಕೋಳಿ ಅಂಗಡಿ ಬಳಿ ಬೈಕ್ನಲ್ಲಿ ಬಂದ ಮೂವರು ಅಪರಿಚಿತರು ಪ್ರವೀಣ್ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದರು.