ನವದೆಹಲಿ , ಜು 27 (DaijiworldNews/MS): ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್) ಅಡಿಯಲ್ಲಿ ವಿಧಿಸಲಾಗಿರುವ ನಿಬಂಧನೆ ಮತ್ತು ಆರೋಪಿಗಳನ್ನು ಬಂಧಿಸಲು ಜಾರಿ ನಿರ್ದೇಶನಾಲಯಕ್ಕೆ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಆರೋಪಿ ಬಂಧನ ವೇಳೆ ಇಡಿ ಅಧಿಕಾರಿಗಳು ಅದಕ್ಕೆ ಸೂಕ್ತ ಕಾರಣ ಬಹಿರಂಗಪಡಿಸುವುದು ಕಡ್ಡಾಯವಲ್ಲ ತನಿಖೆಗೆ ಪೂರಕವಾಗಿ ಆರೋಪಿಗಳ ಆಸ್ತಿ, ಮನೆ ಮತ್ತು ಕಚೇರಿ ಹಾಗೂ ಸಂಬಂಧಿತ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಬಹುದು ಎಂದು ಜಾರಿ ನಿರ್ದೇಶನಾಲಯದ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಈ ಮೂಲಕ ಜಾರಿ ನಿರ್ದೇಶನಾಲಯದ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಇದಲ್ಲದೆ , ಕಾಯ್ದೆ ಅಡಿ ಬಂಧನ ಮತ್ತು ಸಂಪತ್ತು ವಶಕ್ಕೆ ಪಡೆದುಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.