ಬೆಂಗಳೂರು, ಜು 27 (DaijiworldNews/HR): ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆಯಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪ್ರತಿಭಟನೆಯ ವೇಳೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಾರಣ, ಲಾಠಿಚಾರ್ಜ್ ಕೂಡ ಮಾಡಲಾಗಿರುವ ಹಿನ್ನಲೆಯಲ್ಲಿ ಮಹತ್ವದ ಸಭೆಯನ್ನು ತುರ್ತಾಗಿ ಸಿಎಂ ಬಸವರಾಜ ಬೊಮ್ಮಾಯಿ ಕರೆದಿದ್ದಾರೆ.
ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಕಾರ್ಯಕರ್ತರು ಒತ್ತಾಯಿಸುತ್ತಿದ್ದು, ಇದೀಗ ಬೆಳ್ಳಾರೆ ಬೂದಿ ಮುಚ್ಚಿದಂತ ಕೆಂಡವಾಗಿದ್ದು, ಉದ್ವಿಗ್ನ ವಾತಾವಣ ಸ್ಥಳದಲ್ಲಿ ನಿರ್ಮಾಣವಾಗಿದೆ.
ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಹತ್ವದ ಸಭೆಯನ್ನು ಕರೆದಿದ್ದು, ಈ ಸಭೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಪೊಲೀಸ್ ಇಲಾಖೆಯ ವರಿಷ್ಠರು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.