ನವದೆಹಲಿ, ಜು 27 (DaijiworldNews/MS): ಬೀದಿಗಿಳಿದು ಜನರ ಧ್ವನಿ ಎತ್ತಲಾಗದ ಬಿಜೆಪಿಯ "ಸರ್ವಾಧಿಕಾರ" ಧೋರಣೆ ಬಹಿರಂಗವಾಗಿದ್ದು, ಸಂಸತ್ತಿನಲ್ಲಿ ಯಾವುದೇ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಮುಂದಾಗುತ್ತಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಿದ ಇಡಿ ವಿರುದ್ಧ ಹಾಗೂ ಸರ್ಕಾರ ತನಿಖಾ ಸಂಸ್ಥೆಗಳ ದುರುಪಯೋಗವನ್ನು ಪ್ರತಿಭಟಿಸಿ ರಾಹುಲ್ ಗಾಂಧಿ ರಸ್ತೆಯ ಮೇಲೆ ಕುಳಿತುಕೊಂಡಿರುವ ಫೋಟೋಗಳನ್ನು ಹಂಚಿಕೊಂಡಿರುವ ಪ್ರಿಯಾಂಕಾ ಗಾಂಧಿ, ಹಿಂದಿಯಲ್ಲಿ ಟ್ವೀಟ್ ಮಾಡಿ, ಸಂಸತ್ತಿನಲ್ಲಿ ಪ್ರಮುಖ ವಿಷಯಗಳನ್ನು ಚರ್ಚಿಸಲು ಅಥವಾ ಬೀದಿಗಳಲ್ಲಿ ಜನರ ಪರ ಧ್ವನಿ ಎತ್ತಲು ಸಾಧ್ಯವಿಲ್ಲ.ಆದರೆ ಸರ್ವಾಧಿಕಾರಿ ಸರಕಾರವು ಪೊಲೀಸ್ ಮತ್ತು ಏಜೆನ್ಸಿಗಳ ಮೂಲಕ ತಮ್ಮ ವಿರೋಧವನ್ನು ಹತ್ತಿಕ್ಕಲು ಬಯಸುತ್ತದೆ ಇದು ಸತ್ಯಕ್ಕಾಗಿ ಹೋರಾಟ, ತಲೆಬಾಗುವುದಿಲ್ಲ ಅಥವಾ ಹೆದರುವುದಿಲ್ಲ. ಹೋರಾಡುತ್ತೇನೆ, ಗೆಲ್ಲುತ್ತೇನೆ" ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ ಜುಲೈ 21 ರಂದು ಸೋನಿಯಾ ಗಾಂಧಿ ಅವರನ್ನು ಇಡಿ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.