ಚೆನ್ನೈ, ಜು 27 (DaijiworldNews/MS): ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೇವಲ 24 ಗಂಟೆಗಳಲ್ಲಿ ಎರಡನೇ ಪ್ರಕರಣವಾಗಿದ್ದು, ರಾಜ್ಯದಲ್ಲಿ ಎರಡು ವಾರಗಳಲ್ಲಿ ಇದು ಐದನೇ ಪ್ರಕರಣವಾಗಿದೆ.
ಶಿವಗಂಗಾ ಜಿಲ್ಲೆಯ ತನ್ನ ಮನೆಯಲ್ಲಿ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಗಣಿತ ಮತ್ತು ಜೀವಶಾಸ್ತ್ರದ ವಿಷಯಗಳು ತನಗೆ ಕಷ್ಟವಾಗುತ್ತಿದೆ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಈ ಮೊದಲು ನಾಲ್ವರು ಶಾಲಾ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 12 ನೇ ತರಗತಿಯಲ್ಲಿ ಮೂವರು ಮತ್ತು 11 ನೇ ತರಗತಿಯಲ್ಲಿ ಒಬ್ಬರು ವಿವಿಧ ಕಾರಣಗಳಿಂದ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ ಶಿವಕಾಶಿಯಲ್ಲಿ 11ನೇ ತರಗತಿಯ ಬಾಲಕಿ ಶವವಾಗಿ ಪತ್ತೆಯಾಗಿದ್ದಳು. ಈ ನಡುವೆ ತಮಿಳುನಾಡಿನ ಸಿಎಂ ಸ್ಟಾಲಿನ್ ಅವರು ಯುವಜನತೆ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.