ಹುಬ್ಬಳ್ಳಿ, ಜು 27 (DaijiworldNews/DB): ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಕಾರ್ಯಕರ್ತರಿಗೇ ರಕ್ಷಣೆ ಇಲ್ಲದಂತಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಕಳೆದ ಮೂರು ವರ್ಷಗಳಿಂದ ರಾಜ್ಯದ ವಿವಿಧೆಡೆ ಬಿಜೆಪಿ, ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ನಡೆಯುತ್ತಿದೆ. ಇದೀಗ ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತ ಹತ್ಯೆಯಾಗಿದೆ. ಆದರೆ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಕಾರ್ಯಕರ್ತರಿಗೆ ರಕ್ಷಣೆ ಒದಗಿಸುವ ಕೆಲಸವನ್ನೂ ಮಾಡುತ್ತಿಲ್ಲ ಎಂದರು.
ಪ್ರವೀಣ ಹತ್ಯೆ ಹಿಂದಿನ ಕಾರಣ ತನಿಖೆಯಿಂದ ಬಹಿರಂಗವಾಗಬೇಕು. ಸರ್ಕಾರ ಪೊಲೀಸರಿಗೆ ಮುಕ್ತವಾಗಿ ತನಿಖೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದವರು ಇದೇ ವೇಳೆ ಒತ್ತಾಯಿಸಿದರು.