ಬೆಂಗಳೂರು, ಜು 27 (DaijiworldNews/MS): ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಹಾಗೂ ಬಿಜೆಪಿ ಕಾರ್ಯಕರ್ತ ಪ್ರವೀಣ ಹತ್ಯೆ ಹಿನ್ನೆಲೆ ಸ್ವ ಪಕ್ಷದ ಕಾರ್ಯಕರ್ತರ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಸಾಧನಾ ಸಮಾವೇಶ ‘ಜನೋತ್ಸವ’ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ದಿಢೀರ್ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡಿದ್ದು, ಆರ್.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ರಾತ್ರಿ 12.30ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ, ಬೊಮ್ಮಾಯಿ, ‘ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಗುರುವಾರ (ಜುಲೈ 28) ಹಮ್ಮಿಕೊಂಡಿದ್ದ ಸಾಧನಾ ಸಮಾವೇಶ ‘ಜನೋತ್ಸವ’ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ ಎಂದರು.
ಹತ್ಯೆ ನಡುವೆ ಕಾರ್ಯಕ್ರಮ ನಡೆಸಿದರೆ ಕಾರ್ಯಕರ್ತರ ಕೆಂಗಣ್ಣಿಗೆ ಮತ್ತಷ್ಟು ಗುರಿಯಾಗಬೇಕಾಗುತ್ತದೆ ಎಂಬ ಭಯ ರಾಜ್ಯ ಬಿಜೆಪಿ ನಾಯಕರಲ್ಲಿ ಹುಟ್ಟಿಕೊಂಡಿದೆ. ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಗಲಾಟೆ ಗದ್ದಲವೆಬ್ಬಿಸುವ ಆತಂಕವಿತ್ತು. ಇದೇ ಕಾರಣಕ್ಕೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂಬ ಲೆಕ್ಕಚಾರವೂ ಇದರ ಹಿಂದಿದೆ.