ಶಿವಮೊಗ್ಗ, ಜು 30(DaijiworldNews/HR): ಕಾಂಗ್ರೆಸ್ ಪಕ್ಷವು ಬೆಳೆಸಿರುವ ಮತಾಂಧ ಶಕ್ತಿಗಳನ್ನು ಮಟ್ಟ ಹಾಕುವುದೇ ನಮ್ಮ ಸರ್ಕಾರಕ್ಕಿರುವ ದೊಡ್ಡ ಸವಾಲು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಹಿಂದೂ ಯುವಕರ ಮೇಲೆ ದಾಳಿಯಾಗುತ್ತಿದೆ. ಹರ್ಷನ ನಂತರ ಪ್ರವೀಣ್ ಕೊಲೆಯಾಗಿದೆ. ನಿಜಕ್ಕೂ ನನಗೆ ಎರಡು ದಿನ ಊಟವೇ ಸೇರಲಿಲ್ಲ. ಈ ಕೊಲೆಗಾರರನ್ನು ಶೀಘ್ರವೇ ಬಂಧಿಸುತ್ತೇವೆ. ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.
ಇನ್ನು ಒಂದು ವ್ಯವಸ್ಥೆಯ ಮುಖ್ಯಸ್ಥನಾಗಿರುವ ನನಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.
ಸರ್ಕಾರದ ಮತ್ತು ನನ್ನ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ನಮ್ಮವರೇ. ಅವರದು ಸಾತ್ವಿಕ ಪ್ರತಿಭಟನೆಯಾಗಿದೆ. ಇಂತಹ ಪ್ರತಿಭಟನೆಯ ಹಿಂದಿನ ಉದ್ದೇಶ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.