ಜಮ್ಮು-ಕಾಶ್ಮೀರ, ಜು 30(DaijiworldNews/HR): ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಭದ್ರತಾ ಪಡೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಡಗಿಕೊಂಡಿದ್ದ ಇಬ್ಬರು ಉಗ್ರರ ಪೈಕಿ ಓರ್ವ ಎನ್ ಕೌಂಟರ್ನಲ್ಲಿ ಸಾವನ್ನಪ್ಪಿದ್ದು, ಬಾರಾಮುಲ್ಲಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಇನ್ನು ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಇಂದು ಬೆಳಗ್ಗೆ ಬಂಧಿಸಿರುವುದಾಗಿ ತಿಳಿದು ಬಂದಿದೆ.