ಬೆಂಗಳೂರು, ಜು 30 (DaijiworldNews/DB): ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಗಳನ್ನು ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಗೆ ಮುತ್ತಿಗೆ ಹಾಕಿದ ವಿಚಾರಕ್ಕೆ ಸಂಬಂಧಿಸಿ 30 ಮಂದಿ ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಎಬಿವಿಪಿಯ ಓರ್ವ ಮಹಿಳಾ ಕಾರ್ಯಕರ್ತೆ ಸೇರಿದಂತೆ 30 ಕಾರ್ಯಕರ್ತರ ವಿರುದ್ಧ ಜೆ.ಸಿ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಪಿಸಿ ಸೆಕ್ಷನ್ 448, 143, 147, 149ರ ಅಡಿಯಲ್ಲಿ ಮತ್ತು ಕಲಂ 3 ಆಪ್ ಪಿಡಿಪಿಪಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.