ಚಿಕ್ಕಬಳ್ಳಾಪುರ, ಜು 30 (DaijiworldNews/DB): ರಾಜ್ಯದಲ್ಲಿ ಯಾವುದೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿಲ್ಲ. ಈ ಸಂಬಂಧ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಮಂಕಿಪಾಕ್ಸ್ ಪತ್ತೆ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿದ ಅವರು, ಶಂಕಿತ ವ್ಯಕ್ತಿಯೋರ್ವನ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷಾ ವರದಿ ಬಂದ ಬಳಿಕ ಈ ಬಗ್ಗೆ ಗೊತ್ತಾಗಲಿದೆ ಎಂದರು.
ಮಂಕಿಪಾಕ್ಸ್ ಸೋಂಕು ಮಾರಣಾಂತಿಕವಲ್ಲ. ಇದರ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಇದಕ್ಕೆ ಚಿಕಿತ್ಸೆಯೂ ಇದೆ. ಆದರೆ ಕಾಯಿಲೆ ಬಗ್ಗೆ ಮುನ್ನೆಚ್ಚರಿಕೆ ಇರಲಿ ಎಂದು ಅವರು ತಿಳಿಸಿದರು.