ತಿರುವನಂತಪುರಂ, ಜು 30(DaijiworldNews/HR): ಅನೇಕ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದ ನಟ ಶರತ್ ಚಂದ್ರನ್ ಕೇರಳದ ಕಕ್ಕಡ್ನ ಮನೆಯಲ್ಲಿ ಶನಿವಾರ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಶರತ್ ಚಂದ್ರನ್ ಅವರು ಅನೇಕ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದ್ದು, ಅದರಿಂದಾಗಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಇನ್ನು ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿರುವ ಡೆತ್ನೋಟ್ ಕೂಡ ಮನೆಯಲ್ಲಿ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.