ತಿರುವನಂತಪುರಂ, ಜು 30(DaijiworldNews/HR): ಕೇರಳದಲ್ಲಿ ಮಂಕಿಪಾಕ್ಸ್ ಸೋಂಕು ಕಾಣಿಸಿಕೊಂಡಿದ್ದ ಮೊದಲನೇ ಸೋಂಕಿತ ಸಂಪೂರ್ಣವಾಗಿ ಗುಣಮುಖನಾಗಿದ್ದಾನೆ ಎಂದು ತಿಳಿದು ಬಂದಿದೆ.
ಈ ಕುರಿತು ಮಾಹಿತಿ ನೀಡಿರುವ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, ಜು.14ರಂದು ತಿರುವನಂತಪುರಂನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಆತನನ್ನು ಇಂದು ಬಿಡುಗಡೆ ಮಾಡಿ ಮನೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಸೋಂಕಿತನಿಗೆ ಕಳೆದ 72 ಗಂಟೆಗಳ ಅವಧಿಯಲ್ಲಿ ಎರಡು ಬಾರಿ ಮಂಕಿಪಾಕ್ಸ್ ಪರೀಕ್ಷೆ ಮಾಡಲಾಗಿದ್ದು, ಎರಡರಲ್ಲೂ ಆತನಿಗೆ ಸೋಂಕು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.