ಮುಂಬೈ, ಜು 31(DaijiworldNews/HR): ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ಮುಂಬೈನಲ್ಲಿರುವ ಮನೆಗೆ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ಇಂದು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ.
'ಪತ್ರಾ ಚಾಲ್' ಭೂ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾವುತ್ ಅವರಿಗೆ ಜುಲೈ 20 ಮತ್ತು 27 ರಂದು ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ಸಮನ್ಸ್ ನೀಡಲಾಗಿತ್ತು. ಆದರೆ ರಾವುತ್ ಅವರು ಹಾಜರಾಗಲು ಸಾಧ್ಯವಿಲ್ಲ ಎಂದು ಅವರ ಪರ ವಕೀಲರು ತಿಳಿಸಿದ್ದರು ಎನ್ನಲಾಗಿದೆ.
ಇನ್ನು ಸಂಜಯ್ ರಾವುತ್ ಇದಕ್ಕೆ ಪ್ರತಿಕ್ರಿಯಿಸಿ, ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ರಾಜಕೀಯ ದ್ವೇಷದ ಕಾರಣ ನನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದು, ಇಂದು ಬೆಳ್ಳಗ್ಗೆ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.