ನವದೆಹಲಿ, ಜು 31(DaijiworldNews/HR): ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ವೇಟ್ಲಿಫ್ಟರ್ ಬಿಂದ್ಯಾರಾಣಿ ದೇವಿ ಅವರನ್ನು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಅನೇಕ ಗಣ್ಯರು ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದಿರುವ ಬಿಂದ್ಯಾರಾಣಿ ದೇವಿ ಅವರಿಗೆ ಅಭಿನಂದನೆಗಳು. ಈ ಸಾಧನೆಯು ಅವರ ಸದೃಢತೆಯ ದ್ಯೋತಕವಾಗಿದೆ. ಅವರ ಸಾಧನೆ ಪ್ರತಿಯೊಬ್ಬ ಭಾರತೀಯರಿಗೂ ತುಂಬಾ ಸಂತಸ ತರಿಸಿದೆ. ಬಿಂದ್ಯಾರಾಣಿ ಅವರು ಭವಿಷ್ಯದಲ್ಲಿ ಮತ್ತಷ್ಟು ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.
ಇನ್ನು ಶನಿವಾರ ನಡೆದ ಮಹಿಳೆಯರ ವೇಟ್ಲಿಫ್ಟಿಂಗ್ನ 55 ಕೆ.ಜಿ. ವಿಭಾಗದಲ್ಲಿ ಅವರು ಒಟ್ಟು 202 ಕೆ.ಜಿ (86 ಕೆ.ಜಿ+ 116 ಕೆ.ಜಿ) ಭಾರ ಎತ್ತುವ ಮೂಲಕ ಎರಡನೇ ಸ್ಥಾನ ಪಡೆದಿದ್ದಾರೆ.