ಶ್ರೀನಗರ, ಜು 31(DaijiworldNews/HR): ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಲಷ್ರ್ಕ-ಎ-ತೊಯ್ಬಾ ಉಗ್ರ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟ ಉಗ್ರನನ್ನು ಬಾರಾಮುಲ್ಲಾದ ಪಟ್ಟಣ ನಿವಾಸಿ ಇರ್ಷಾದ್ ಅಹ್ಮದ್ ಭಟ್ ಗುರುತಿಸಲಾಗಿದೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಕಾಶ್ಮೀರ ವಲಯ ಪೊಲೀಸರು, ಜಿಲ್ಲಾಯ ಬಿನ್ನಿರ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿ ಮರೆಯಲ್ಲಿ ಅಡಗಿದ್ದ ಉಗ್ರರು ಏಕಾಏಕಿ ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ ನಂತರ ಗುಂಡಿನ ಚಕಮಕಿ ನಡೆಯಿತು ಇದರಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ ಎಂದು ತಿಳಿಸಿದ್ದಾರೆ.
ಇನ್ನು ಈತ ಸಕ್ರಿಯವಾಗಿ ನಿಷೇತ ಭಯೋತ್ಪಾದಕ ಸಂಘಟನೆ ಎಲ್ಇಟಿಯೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದ್ದು, ಉಗ್ರನ ಬಳಿ ಇದ್ದ 1 ಎಕೆ47 ರೈಫಲ್, 30 ಸುತ್ತು ಗುಂಡು ವಶಪಡಿಸಿಕೊಳ್ಳಲಾಗಿದೆ.