ಚಿತ್ರದುರ್ಗ, ಜು 31 (DaijiworldNews/DB): ಬೊಲೆರೊ ವಾಹನ ಪಲ್ಟಿಯಾಗಿ ಓರ್ವ ಸಾವನ್ನಪ್ಪಿ ಹತ್ತು ಮಂದಿ ಗಾಯಗೊಂಡ ಘಟನೆ ಇಲ್ಲಿನ ಕೆ.ಆರ್. ಹಳ್ಳಿ ಗೇಟ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಮಹಾರಾಷ್ಟ್ರ ಮೂಲದ ರಾಜು (40) ಎಂದು ಗುರುತಿಸಲಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದ್ದು, ಎಲ್ಲರೂ ತಿರುಪತಿಗೆ ಭೇಟಿ ನೀಡಿ ಮಹಾರಾಷ್ಟ್ರಕ್ಕೆ ಹಿಂತಿರುಗುತ್ತಿದ್ದರು ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.