ಬೆಂಗಳೂರು, ಜು 31(DaijiworldNews/HR) : ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಏಕಕಾಲದಲ್ಲಿ ದಾಳಿ ನಡೆಸಿದ್ದು, ಮೂವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದುಕೊಂಡಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ತುಮಕೂರು ಹಾಗೂ ಬೆಳಗಾವಿಯಲ್ಲಿ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ಮೂರು ಶಂಕಿತ ಉಗ್ರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಎನ್ಐಎ ಹಾಗೂ ರಾಜ್ಯ ಗುಪ್ತದಳ ಅಧಿಕಾರಿಗಳಿಂದ ಈ ಕಾರ್ಯಾಚಾರಣೆ ನಡೆಸಿದ್ದು, ಮೂವರು ಶಂಕಿತರು ಐಸಿಸ್ ಜತೆ ಸಂಪರ್ಕ ಹೊಂದಿದ್ದರು ಎಂಬ ಮಾಹಿತಿ ಮೇರೆಗೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.