ಬೆಂಗಳೂರು, ಜು 31(DaijiworldNews/HR): ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಬಿರುಗಾಳಿಯೂ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಭಾರಿ ಮಳೆಯಾಗಲಿದ್ದು, ಆಗಸ್ಟ್ 2ರವರೆಗೂ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ.
ಇನ್ನು ಮಳೆಯೊಂದಿಗೆ ಬಿರುಗಾಳಿಯೂ ಬೀಸುವ ಸಾಧ್ಯತೆಯಿದ್ದು, ಪ್ರತಿ ಗಂಟೆಗೆ 40-50 ಕೀ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.