ಬೆಂಗಳೂರು, ಆ 01 (DaijiworldNews/HR): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆಯಾದ ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಹತ್ಯೆಯಾದ ಪ್ರವೀಣ್ ನೆಟ್ಟರ್ ಮನೆಗೆ ಭೇಟಿ ನೀಡಿ ಮಸೂದ್ ಹಾಗೂ ಫಾಝೀಲ್ ಮನೆಗೆ ಮುಖ್ಯಮಂತ್ರಿ ಭೇಟಿ ಕೊಡದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದ್ದು, ಮುಂದಿನ ದಿನಗಳಲ್ಲಿ ಅವರಿಬ್ಬರ ಮನೆಗೆ ಭೇಟಿ ನೀಡುತ್ತೇನೆ ಎಂದರು.
ಇನ್ನು ಪ್ರವೀಣ್ ನೆಟ್ಡಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯ ಹಂತದಲ್ಲಿದ್ದು, ಆದಷ್ಟು ಬೇಗನೇ ಕೊಲೆಗಡುಕರ ಪತ್ತೆಯಾಗಲಿದೆ. ಈಗಾಗಲೇ ಎನ್ಐಎಗೆ ಕೇಸ್ ಬಗ್ಗೆ ಅನೌಪಚಾರಿಕವಾಗಿ ತಿಳಿಸಿದ್ದು, ಕೆಲವು ಎನ್ಐಎ ಅಧಿಕಾರಿಗಳು ಕೇರಳ ಮತ್ತು ಮಂಗಳೂರಿನಲ್ಲಿ ಈಗಾಗಲೇ ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.